ಪುತ್ತೂರು : ಜಿಡೆಕಲ್ಲು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ನಡೆಯಿತು.
ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಸರಕಾರದ ವತಿಯಿಂದ ಎಲ್ಲಾ ಅನುದಾನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಂಬ್ರ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದುಗಪ್ಪ ನಾಯ್ಕ್, ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ನಳಿನಾಕ್ಷಿ ಎ. ಎಸ್, ಸಾಂಸ್ಕೃತಿಕ ಸಂಘ ಸಂಚಾಲಕಿ ಸುಜಾತಾ ಎಂ ಕೆ, ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು