ಫೆ.4 : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ನೆಹರುನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ  ವಾರ್ಷಿಕ ಜಾತ್ರೋತ್ಸವ ಫೆ.4 ಶನಿವಾರ ನಡೆಯಲಿದೆ.

ಜಾತ್ರೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ  9.00 ಕ್ಕೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11.30. ಕ್ಕೆ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡುವುದು. ರಾತ್ರಿ ಗಂಟೆ 9.30 ಕ್ಕೆ ಗೊಂದಳ ಪೂಜೆ, 12.00 ಕ್ಕೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ಜರಗಲಿದೆ. ಜಾತ್ರೋತ್ಸವದ ಅಂಗವಾಗಿ ಫೆ.3 ಶುಕ್ರವಾರ ಸಂಜೆ 4 ಗಂಟೆಗೆ ಕಲ್ಲೇಗ ಮತ್ತು ಪೋಳ್ಯ ಬೈಲಿನವರಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ ಎಂದು ದೈವಸ್ಥಾನದ ಅಧ್ಯಕ್ಷ ಅಜಿತ್‌ಕುಮಾರ್ ಕಲ್ಲೇಗ‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top