ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ:ಶಾಸಕ ಸಂಜೀವ ಮಠಂದೂರು
ವಿಟ್ಲ : ವಿಟ್ಲ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದಿ ಯೋಜನೆ ಬಿ. ಸಿ ಟ್ರಸ್ಟ್, ವಿಟ್ಲ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಒಕ್ಕೂಟದ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಹಾಗೂ ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ ಮಂಗಳವಾರ ವಿಟ್ಲ ಚಂದಳಿಕೆ ಭಾರತ್ ಅಡಿಟೋರಿಯಂನಲ್ಲಿ ನಡೆಯಿತು.
ಶಾಸಕ ಸಂಜೀವ ಮಠಂದೂರು ಕೃಷಿ ಸಲಕರಣೆಗಳನ್ನು ವಿತರಣೆ ಮಾಡಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನೀಡಿದ ಕೊಡುಗೆಗಳಿಂದ ಬಡತನ ನಿವಾರಣೆಗೆ ಸಹಕಾರಿಯಾಗಿದೆ. ಯೋಜನೆಯ ಶ್ರೀ ಶಕ್ತಿ. ಸ್ವಸಹಾಯ ಸಂಘ, ಸಿರಿಗಳ ಮೂಲಕ ಹಲವು ಕಾರ್ಯಕ್ರಮ ಗಳನ್ನು ಒಕ್ಕೂಟ ಮಾಡುತ್ತಿದೆ. ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡಿ ನಿರುದ್ಯೋಗ ನಿರ್ಮೂಲನೆ ಸಹಕಾರಿಯಾಗಿದೆ. ಅಲ್ಲದೆ ಕೃಷಿಕರಿಗೆ ಉಪಯುಕ್ತ ಸಲಕರಣೆ ಕೊಡುವ ಮುಖಾಂತರ ಒಳ್ಳೆಯ ಕೆಲಸ ಮಾಡುತ್ತಿರುವ ಒಕ್ಕೂಟ ಇನ್ನು ಹೆಚ್ಚು ಕೆಲಸ ಮಾಡುವಂತಾಗಲಿ ಎಂದರು.
ಶ್ರೀಧಾಮ ಮಾಣಿಲದ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರಗತಿಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್‌ಚಂದ್ರ ವಿಟ್ಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಉಡುಪಿಯ ವಸಂತ ಸಾಲಿಯಾನ್, ಯೋಜನೆಯ ಬಿ.ಸಿ.ಟ್ರಸ್ಟ್‌ನ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಮನೋಜ್ ಮೆನೇಜಸ್,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಅಧ್ಯಕ್ಷ ರೋನಾಲ್ಡ್ ಡಿ’ ಸೋಜಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ ದ. ಕ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ವಿಟ್ಲ ಜನಜಾಗೃತಿ ವಲಯ ಅಧ್ಯಕ್ಷ ಕೃಷ್ಣಯ್ಯ ಬಲ್ಲಾಳ್, ಇಕೊ ಬ್ಲಿಸ್ ಕಂಪನಿ ಮಾಲಕ ರಾಜರಾಮ್ ಸಿ.ಜಿ., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಉಪಸ್ಥಿತರಿದ್ದರು.