ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ.7 ಹಾಗೂ 8 ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಜಾತ್ರೋತ್ಸವದ ಅಂಗವಾಗಿ ಫೆ.6 ಸೋಮವಾರ ಬೆಳಿಗ್ಗೆ 10 ಕ್ಕೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ಸವಣೂರು ಪುದುಬೆಟ್ಟು ಜಿನ ಮಂದಿರದಿಂದ ಹೊರಡುವುದು. ಫೆ.7 ಮಂಗಳವಾರ ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ, ಅನ್ನಸಂತರ್ಪಣೆ ಜರಗಲಿದೆ. ಸಂಜೆ 6 ರಿಂದ ದೀಪಾರಾಧನೆ, ತಾಯಂಬಕ ಸೇವೆ, ರಂಗಪೂಜೆ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ಅನ್ನಸಂತರ್ಪಣೆ ನಡೆಯಲಿದೆ.

ಫೆ.8 ಬುಧವಾರ ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ , ರಾತ್ರಿ 8 ರಿಂದ ಶ್ರೀ ಉಳ್ಳಾಲ್ತಿ ದೈವಕ್ಕೆ ನೇಮೋತ್ಸವ, ಅನ್ನಸಂತರ್ಪಣೆ, ಬಳಿಕ ರಾತ್ರಿ ಶ್ರೀ ಉಳ್ಳಾಲ್ತಿ ದೈವಕ್ಕೆ ಹರಕೆ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top