ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.

ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲೀಷ್ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ವಯೋಮಿತಿ 18 ರಿಂದ 40 ವರ್ಷ. ಅಂಕಗಳ ಆಧಾರದಲ್ಲಿ ಆನ್ಲೈನ್ ಮೂಲಕವೇ ನೇಮಕಾತಿ ಇದೇ ಮೊದಲ ಬಾರಿಗೆ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಅಖಿಲ ಭಾರತ ಮಟ್ಟದಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ದೇಶಾದ್ಯಂತ ಒಟ್ಟು 40,889 ಹುದ್ದೆಗಳು ಖಾಲಿ ಇವೆ. ರಾಜ್ಯದಲ್ಲಿ 3,036 ಹುದ್ದೆಗಳು ಖಾಲಿ ಇದ್ದು, ಮಂಗಳೂರು ಅಂಚೆ ವಿಭಾಗದಲ್ಲಿ 95 ಮತ್ತು ಪುತ್ತೂರು ಅಂಚೆ ವಿಭಾಗದಲ್ಲಿ 113 ಹುದ್ದೆಗಳು ಖಾಲಿ ಇದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 273 ಹುದ್ದೆಗಳು ಖಾಲಿ ಇವೆ.

 ಹೆಚ್ಚಿನ ಮಾಹಿತಿಗೆ ಆಯಾ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು. ಮಂಗಳೂರು ವಿಭಾಗ ಸಂಪರ್ಕ ಸಂಖ್ಯೆ : 0824-2218400





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top