ಪುತ್ತೂರು : ತಾಲೂಕಿನ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಬಾಲಾಲಯ ಪ್ರತಿಷ್ಠೆ ಹಾಗೂ ಅನುಜ್ಞಾ ಕಲಶ ಕಾರ್ಯಕ್ರಮಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಕ್ಷೇತ್ರದ ಮೋಹನ್‌ದಾಸ್ ಸ್ವಾಮೀಜಿ ಭೇಟಿ ನೀಡಿ ಆಶೀರ್ವಚನ ನೀಡಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯಾಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ, ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ದಿನೇಶ್ ಮೆದು,,ಚಂದ್ರಶೇಖರ ಬರೆಪ್ಪಾಡಿ,ಗಣೇಶ್ ಉದನಡ್ಕ, ಗಿರಿಶಂಕರ ಸುಲಾಯ, ಲೋಕೇಶ್ ಬರೆಪ್ಪಾಡಿ, ಲೋಹಿತಾಕ್ಷ ಕೆಡೆಂಜಿಕಟ್ಟ ಸೇರಿದಂತೆ ಭಕ್ತಾದಿಗಳು ಪಾಲ್ಗೊಂಡಿದ್ದರು.