ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು : ನೆಹರೂನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ. ವಾರ್ಷಿಕ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.

ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11 ಗಂಟೆಗೆ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ನಡೆಯಿತು.ಮಧ್ಯಾಹ್ನ ದೈವಸ್ಥಾನದ ಭಂಡಾರದ ವತಿಯಿಂದ‌ ನೆರೆದಿದ್ದ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್ ಕಲ್ಲೇಗ, ಸದಸ್ಯರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಭಕ್ತಾಧಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top