ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್”

ಪುತ್ತೂರು : ರಾಷ್ಟ್ರಮಟ್ಟದ ಕಲೋತ್ಸವ ವಿಜೇತ ಹಾಗೂ ಪ್ರಧಾನಮಂತ್ರಿಗಳ ಪರೀಕ್ಷಾ ಪೇ ಚರ್ಚಾಕಾರ್ಯಕ್ರಮದಲ್ಲಿ ಭಾಗವಹಿಸಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಅವರ ಸನ್ಮಾನ ಸಮಾರಂಭ ಪ್ರತಿಭಾ ಸಮ್ಮಾನನಮ್ ಶುಕ್ರವಾರ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಮ್.ಕೃಷ್ಣ ಭಟ್ ಮಾತನಾಡಿ, ಪ್ರತಿಭೆ ಒಂದು ದೀಪದಂತೆ. ದೀಪ ಪ್ರಜ್ವಲಿಸಿದಾಗ ಅದಕ್ಕೆ ಪ್ರಾಮುಖ್ಯತೆ ಬರುತ್ತದೆ. ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಒಂದು ಅವಿಸ್ಮರಣೀಯ ಅಮೃತ ಘಳಿಗೆ ಎಂದರು.
ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ ಮಾತನಾಡಿ, ಪ್ರತಿಭೆಯ ಗುರುತಿಸುವಿಕೆ ಹಾಗೂ ಪೋಷಣೆಯಲ್ಲಿ ಹೆತ್ತವರ ಹಾಗೂ ಶಿಕ್ಷಕರ ಪಾತ್ರ ಮಹತ್ವವಾದದು ಎಂದು ಹೇಳಿದರು.

ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿ, ಒಬ್ಬ ವಿದ್ಯಾರ್ಥಿಯ ಪ್ರತಿಭೆ ಇತರಿಗೆ ಮಾದರಿ ಮತ್ತು ಗುರುತಿಸುವಿಕೆ ಪ್ರೇರಣಾದಾಯಿ ಎಂದು ಹೇಳಿದರು.































 
 

ಸನ್ಮಾನ ಸ್ವೀಕರಿಸಿ ಮಾತನಾಡಿದ ತೇಜಚಿನ್ಮಯ ಹೊಳ, ಬೆನ್ನು ತಟ್ಟಿ ಪ್ರೋತ್ಸಾಹಿಸಿದವರನ್ನು ಸ್ಮರಿಸಿ, ಪ್ರಧಾನಿಗಳ ಭೇಟಿಯ ಅನುಭವವನ್ನು ಹಂಚಿಕೊಂಡರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ್.ಕೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ ಶುಭ ಹಾರೈಸಿದರು. ವೇದಿಕೆಯಲ್ಲಿ ತೇಜ ಚಿನ್ಮಯನ ಹೆತ್ತವರಾದ ಹರೀಶ್ ಹೊಳ್ಳ, ಡಾ.ಸುಚಿತ್ರ ಹೊಳ್ಳ, ಪುತ್ತೂರು ರೋಟರಿ ಪೂರ್ವದ ಅಧ್ಯಕ್ಷ ಶರತ್ ಕುಮಾರ್ ರೈ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ, ಶಿಕ್ಷಕಿಯರದ ಮಮತಾ, ಸಂಧ್ಯಾ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶಾಂತಿ ಶೆಣೈ ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕ ರವಿ ನಾರಾಯಣ್ ಎಂ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ಅನುರಾಧ ಹಾಗೂ ಯಶೋಧ ಸ್ವರಚಿತ ಕವನ ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಹಪಾಠಿ ವಿದ್ಯಾರ್ಥಿಗಳು ಅಭಿನಂಧನಾ ಗೀತೆ ಹಾಡಿದರು. ಶಿಕ್ಷಕ ವೆಂಕಟೇಶ್ ಪ್ರಸಾದ್ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top