ಫೆ.19 : ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ
ಪುತ್ತೂರು : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಫೆ.17 ಹಾಗೂ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಫೆ.19 ರಂದು ನಡೆಯಲಿದೆ.
ಶ್ರೀ ಅನ್ನಪೂರ್ಣೇಶ್ವರಿ ಕ್ಷೇತರದ ಧರ್ಮದರ್ಶಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ ಅವರ ನೇತೃತ್ವದಲ್ಲಿ ಫೆ.17 ರಂದು ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 7 ಕ್ಕೆ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ನಾಗಮಂಡಲ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 5.20 ಕ್ಕೆ ಶ್ರೀ ದೇವರ ಬಲಿ ಹೊರಟು ರಥೋತ್ಸವ, ಫೆ.14 ರಂದು ಬೆಳಿಗ್ಗೆ 8 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ರಥೋತ್ಸವ, ದರ್ಶನಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ.
ಫೆ.19 ರಾತ್ರಿ 7 ಕ್ಕೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ದೈವದ ಭಂಡಾರ ಬರುವುದು. ಮೇಲೇರಿಗೆ ಬೆಂಕಿ ಕೊಡುವುದು ಬಳಿಕ ಅನ್ನಸಂತರ್ಪಣೆ, ರಾತ್ರಿ 11.30 ಕ್ಕೆ ಕುಂಡಟ್ಟು ದೈವ ಪ್ರರಂಭ, ಬೆಳಿಗ್ಗೆ 4.30 ರಿಂದ ಶ್ರೀ ವಿಷ್ಣುಮೂರ್ತಿ ದೈವ ಮೇಲೇರಿಗೆ ಬೀಳುವುದು, ಬಳಿಕ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, 6.30 ರಿಂದ ಗುಳಿಗ ದೈವದ ನೇಮ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.