ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಶುಕ್ರವಾರ ಹಾಗೂ ಶನಿವಾರ ನಡೆಯಿತು.
ಜಾತ್ರೋತ್ಸವದ ಅಂಗವಾಗಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಸಾಮೂಹಿಕ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆಯಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರದಾದ ವಿತರಣೆಯಾಗಿ ರಾತ್ರಿ ಶ್ರೀ ದೇವರ ಬಲಿ ಹೊರಟು ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆಪೂಜೆ, ಭಜನಾ ಕಾರ್ಯಕ್ರಮ ನಡೆಯಿತು.
ಶನಿವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಬಳಿಕ ದೇವರು ಒಳಗಾಗಿ ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ, ಬಳಿಕ ದೈವದ ಭಂಡಾರ ತೆಗೆದು ಪಿಲಿಭೂತ ದೈವದ ನೇಮ ನಡಾವಳಿ ಜರಗಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಪತಿ ಬೈಪಡಿತ್ತಾಯ, ಗೌರವಾಧ್ಯಕ್ಷ ಡಾ.ಅಶೋಕ್ ಪಡಿವಾಳ್, ಶ್ರೀಧರ ಬೈಪಡಿತ್ತಾಯ ಭಕ್ತಾದಿಗಳು ಪಾಲ್ಗೊಂಡಿದ್ದರು.