ಫೆ.11 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ : ಗೃಹ, ಸಹಕಾರಿ ಸಚಿವ ಅಮಿತ್‍ ಶಾ ಅಗಮನ

ಪುತ್ತೂರು : ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮರಾಟ ಮತ್ತು ಸಂಸ್ಕರಣಾ ಸಹಕಾರಿ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆ ಫೆ.11 ಶನಿವಾರ ಮಧ್ಯಾಹ್ನ 2.30 ಕ್ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಲಿದೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‍ ಶಾ ಸಂಭ್ರಮಾಚರಣೆಯನ್ನು ಉದ್ಘಾಟಿಸಲಿದ್ದು, ಕ್ಯಾಂಪ್ಕೋ ಅಧ್ಯಕ್ಷ ೆ.ಕಿಶೋರ್‍ ಕುಮಾರ್‍ ಕೊಡ್ಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‍ ಜೋಶಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್‍ ಪಾಲ್ಗೊಳ್ಳಲಿದ್ದಾರೆ.



































ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‍ ಕುಮಾರ್‍ ಕಟೀಲ್‍ ಶುಭಾಶಂಸನೆ ಮಾಡುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ಉಸ್ತುವಾರಿ ಸಚಿವ ಸುನಿಲ್‍ ಕುಮಾರ್‍, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್‍.ಡಿ.ಸೋಮಶೇಖರ್‍, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಅಂಗಾರ ಎಸ್‍., ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ಯು.ರಾಜೇಶ್‍ ನಾಯ್ಕ್‍, ಬೆಳ್ತಂಗಡಿ ಶಾಸಕ ಹರೀಶ್‍ ಪೂಂಜಾ, ಪುತ್ತೂರು ನಗರಸಭೆ ಅಧ್ಯಕ್ಷ ಕೆ.ಜೀವಂಧರ್‍ ಜೈನ್‍ ಉಪಸ್ಥಿತರಿರುವರು ಎಂದು ಕ್ಯಾಂಪ್ಕೋ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top