ಪುತ್ತೂರು : ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮುಂದಿನ 50 ವರ್ಷಕ್ಕೆ ಪೂರಕವಾದ ವ್ಯವಸ್ಥೆ ಆಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಸೋಮವಾರ 10 ಕೋಟಿ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕಾಮಗಾರಿಗೆ 34ನೇ ನೆಕ್ಕಿಲಾಡಿಯ ಶಕ್ತಿನಗರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ರಸ್ತೆಗಳ ಅಭಿವೃದ್ಧಿ ಆಗುತ್ತಿದ್ದಂತೆ ರಸ್ತೆಗಳನ್ನು ಮೇಲದರ್ಜೆಗೆ ಏರಿಸುವ ಕೆಲಸವೂ ಆಗುತ್ತಿದೆ. ಉಪ್ಪಿನಂಗಡಿ ಪ್ರವಾಸೋದ್ಯಮ ಕೇಂದ್ರ ಮಾಡುವ ಯೋಜನೆಗೆ ಪೂರಕವಾಗಿ ಸಂಗಮ ಕ್ಷೆತ್ರದಲ್ಲಿ ಬೋಟಿಗ್ ವ್ಯವಸ್ಥೆ ಮಾಡುವ ಯೋಜನೆ ಇದೆ. ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ ಮಾತನಾಡಿ, ಪುತ್ತೂರು ಕ್ಷೆತ್ರ ದಲ್ಲಿ ಕಳೆದ 5 ವರ್ಷದಲ್ಲಿ ಅಭೂತ ಪೂರ್ವ ಅಭಿವೃದ್ಧಿ ಆಗುವ ಮೂಲಕ ಜನರ ಬೇಡಿಕೆ ಈಡೇರಿಸುವ ಕೆಲಸ ಆಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ, ತಾಲೂಕು ಪಂಚಾಯತ್ ಸದಸ್ಯರುಗಳು, ನೆಕ್ಕಿಲಾಡಿ, ಉಪ್ಪಿನಂಗಡಿ, ಕೋಡಿಂಬಾಡಿ ಗ್ರಾಮದ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಸ್ವಪ್ನ ಗಾಣಿಗ ಸ್ವಾಗತಿಸಿದರು. ನೆಕ್ಕಿಲಾಡಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್. ವಂದಿಸಿದರು. ಸುರೇಶ್ ಅತ್ರಮಜಲ್ ಕಾರ್ಯಕ್ರಮ ನಿರೂಪಿಸಿದರು.