ಪುತ್ತೂರು : ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಗೆ ಶೀಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಸೋಮವಾರ ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಸಮಾಜದಲ್ಲಿ ಒಳ್ಳೆಯ ಇತಿಹಾಸ ಸೃಷ್ಟಿ ಮಾಡುವ ಕೆಲಸವನ್ನು ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಮಾಡುತ್ತಾರೆ. ಮಕ್ಕಳಿಗೆ ಮೂಲಭೂತ ಸೌಕರ್ಯವಾದ ಶೌಚಾಲಯ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ನೀರಿನ ಘಟಕ ಕೊಡುವ ಕೆಲಸ ಸರಕಾರ ಮಾಡಿದೆ. ಹೀಗೆ ಹಲವು ಯೋಜನೆಗಳನ್ನು ಸರಕಾರ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಮಣ್ಯ, ಉಪಾಧ್ಯಕ್ಷ ಸಂತೋಷ್ ಮಣಿಯಣಿ, ಎಸ್‌ಡಿಎಮ್‌ಸಿ ಅಧ್ಯಕ್ಷ ದಿನೇಶ್ ಮರತ್ತಮೂಳೆ, ಸರಕಾರಿ ಪ್ರೌಡ ಶಾಲೆ ಕಾರ್ಯಾಧ್ಯಕ್ಷ ತಿಲಕ್ ರೈ, ಮುಖ್ಯ ಶಿಕ್ಷಕ ಪೇರಸ್ ಸಿಕ್ವೆರ, ಸಚಿನ್ ರೈ, ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಉಮೇಶ್ ಕನ್ನಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮ ಕುಮಾರಿ ಹಾಗೂ ಪಂಚಾಯತ್ ಸದಸ್ಯರು, ಎಸ್‌ಡಿಎಮ್‌ಸಿ ಸದಸ್ಯರು ಉಪಸ್ಥಿತರಿದ್ದರು.