ಪುತ್ತೂರು : ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ಫೆ 9 ಗುರುವಾರ ಮಂಜಲ್ಪಡ್ಪು ಸುಧಾನ ಪ್ರೌಢ ಶಾಲಾ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಪ್ರೌಢ ಶಾಲೆಗಳಲ್ಲಿ ಯಾವುದೇ ಕೊರತೆ ಆಗದಂತೆ ಸರಕಾರ ಯೋಜನೆಯನ್ನು ಹಾಕಿಕೊಳ್ಳುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ, ಉಳಿಸುವ ಕೆಲಸ ಆಗಿದೆ. ರಾಷ್ಟ್ರಿಯ ಶಿಕ್ಷಣ ನೀತಿಯಿಂದ ಇಂದಿನ ನಮ್ಮ ಶಿಕ್ಷಣ ಡಿಜಿಟಲ್ ಶಿಕ್ಷಣಕ್ಕೆ ಪೂರಕವಾಗಿ ಶೈಕ್ಷಣಿಕ, ವೈಜ್ಞಾನಿಕ ವ್ಯವಸ್ಥೆ ಮುಂದಿನ ದಿನಗಳಲ್ಲಿ ಆಗಬೇಕು. ಈ ಮೂಲಕ ಪುತ್ತೂರು ತಾಲೂಕನ್ನು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವಂತೆ ಕರೆ ನೀಡಿದರು. ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಭಿವೃದ್ಧಿಯ ವಿಷಯದಲ್ಲಿ ಪುತ್ತೂರು ತಾಲೂಕು ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿ ಶಾಸಕರನ್ನು ಅಭಿನಂದಿಸಿದರು.
ಮುಖ್ಯ ಅತಿಥಿಯಾಗಿ ಸುದಾನ ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್ ಮಾತನಾಡಿ, ಸಂಪೂರ್ಣ ಸಾಕ್ಷರತಾ ಆಂದೋಲನ ನಡೆದಾಗ ಉಪ್ಪಿನಂಗಡಿಯಲ್ಲಿ ಹಗಲು ರಾತ್ರಿ ದುಡಿದವರು ಶಾಸಕ ಸಂಜೀವ ಮಠಂದೂರು ಎಂದು ಸ್ಮರಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯ ವಿಷ್ಣು ಪ್ರಸಾದ್, ಆಕ್ಷರ ದಾಸೋಹ ಸಹಾಯಕ ನಿರ್ದೇಶಕ ನವೀನ್ ವೇಗಸ್, ಕ್ಷೇತ್ರ ಸಮನ್ವಯಾಧಿಕಾರಿ ಹರಿಪ್ರಸಾದ ಎಮ್, ತಾಲೂಕು ಎಸ್ಸೆಸ್ಸೆಲ್ಸಿ ನೋಡೆಲ್ ಅಧಿಕಾರಿ ನಾರಾಯಣ ಕೆ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎ ಎಸ್, ಕಡಬ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ಸುದಾನ ಶಾಲಾ ಮುಖ್ಯ ಶಿಕ್ಷಕಿ ಲವಿನಾ ಹನ್ಸ್ ಉಪಸ್ಥಿತರಿದ್ದರು. ಸುದಾನ ಶಾಲಾ ಮಕ್ಕಳು ಪ್ರಾರ್ಥನೆ ಹಾಡಿದರು. ನಾರಾಯಣ ಕೆ. ವಂದಿಸಿದರು. ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕಿನ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು,ಇಸಿಒ ಅಮೃತಕಲಾ,ಬಿಐಇಆರ್ ಟಿ ತನುಜಾ ಹಾಗೂ ಸೀತಮ್ಮ,ಸಿ ಆರ್ ಪಿ ಶಶಿಕಲಾ ಉಪಸ್ಥಿತರಿದ್ದರು.