ಪುತ್ತೂರು : ಈಶ್ವರಮಂಗಲದ ಹನುಮಗಿರಿ ಕ್ಷೇತ್ರದ ಅಮರಗಿರಿ ಭಾರತಿ ಜ್ಯೋತಿ ಮಂದಿರ ಉದ್ಘಾಟನೆ ನೆರವೇರಿಸಲು ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಹನುಮಗಿರಿಯಲ್ಲಿ ಹ್ಯಾಲಿಪ್ಯಾಡ್ನ್ನು ಹನುಮಗಿರಿ ಕ್ಷೇತ್ರದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು.
ಕ್ಷೇತ್ರದ ಅರ್ಚಕರು ವೈದಿಕ ವಿಧಾನ ನೆರವೇರಿಸಿದರು.
ಈ ಸಂದರ್ಭದಲ್ಲಿ sಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ವಿಟ್ಲ ಪಟ್ಟಣ ಪಂಚಾಯಿತಿಯ ಅರುಣ್ ವಿಟ್ಲ, ಚಂದ್ರಶೇಖರ ರಾವ್ ಬಪ್ಪಳಿಗೆ, ಸೀತಾರಾಮ ರೈ ಕೆದಂಬಾಡಿಗುತ್ತು, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಕ ಇಂಜಿನಿಯರ್ ರಾಜಾರಾಮ್ ಮತ್ತಿತರರು ಉಪಸ್ಥಿತರಿದ್ದರು.