ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಗಳ ವಿವರವನ್ನೊಳಗೊಂಡ 2023ನೇ ಸಾಲಿನ ನೂತನ ಕ್ಯಾಲೆಂಡರ್‍ನ್ನು ಗುರುವಾರ ಶಾಸಕ ಸಂಜೀವ ಮಠಂದೂರು ಬಿಡುಗಡೆ ಮಾಡಿದರು.
ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ನೂತನ ಕ್ಯಾಲೆಂಡರನ್ನು ಭಕ್ತರಿಗೆ ಉಚಿತವಾಗಿ ನೀಡಲಾಗುವುದು. ಜತೆಗೆ ಯುಗಾದಿ ಸಂದರ್ಭದಲ್ಲಿ ಭಾರತೀಯ ದಿನದರ್ಶಿಕೆಯ ಕ್ಯಾಲೆಂಡರ್ ಲೋಕಾರ್ಪಣೆ ಮಾಡಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಈ ಸಂದರ್ಭ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ.ಐತ್ತಪ್ಪ ನಾಯ್ಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಮತ್ತಿತರರು ಉಪಸ್ಥಿತರಿದ್ದರು.