ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ

ಪುತ್ತೂರು : ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಅಮಿತ್‍ ಶಾ ಆಗಮನದ ಹಿನ್ನಲೆಯಲ್ಲಿ ಫೆ. 11ರಂದು ಪುತ್ತೂರು ನಗರದಲ್ಲಿ ವಾಹನ ಸಂಚಾರ ಬದಲಿ ಮಾರ್ಗಸೂಚಿ ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 273 ರ ಮಾಣಿ- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ನಿಷೇಧ ಮಾಡಲಾಗಿದೆ.

ಮಂಜಲ್ಪಡ್ಪು ಬೈಪಾಸ್‍ ಜಂಕ್ಷನ್‍ನಿಂದ ಮುಕ್ರಂಪಾಡಿವರೆಗಿನ ರಸ್ತೆಯಲ್ಲಿ 2.30 ರಿಂದ ಸಂಜೆ 5.30ರವರೆಗೆ ವಾಹನ ಸಂಚಾರಕ್ಕೆ ನಿಷೇಧ. ಮಂಗಳೂರಿನಿಂದ ಮಡಿಕೇರಿಗೆ ಹೋಗುವ ವಾಹನಗಳು ಮಂಜಲ್ಪಡ್ಪು – ಬೊಳುವಾರು ವೃತ್ತ – ದರ್ಬೆ – ಪುರುಷರಕಟ್ಟೆ – ಪಂಜಳ ಮಾರ್ಗವಾಗಿ ಪರ್ಪುಂಜ ತಲುಪುವುದು. ಮಡಿಕೇರಿ ಕಡೆಯಿಂದ ಬರುವ ವಾಹನಗಳು ಪರ್ಪುಂಜ ಮೂಲಕ ಪಂಜಳ – ಪುರುಷರಕಟ್ಟೆ –ದರ್ಬೆ – ಬೊಳುವಾರು ಜಂಕ್ಷನ್ ಮೂಲಕ ಮಂಜಲ್ಪಡ್ಪು ಮಾರ್ಗವಾಗಿ ಮುಂದುವರಿಯುವಂತೆ ಪುತ್ತೂರು ಸಹಾಯಕ ಆಯುಕ್ತರು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top