ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ 5ನೇ ಕೃಷಿ ಯಂತ್ರ ಮೇಳ 2023 ಮತ್ತು ಕನಸಿನ ಮನೆ ಕಾರ್ಯಕ್ರಮದ 2ನೇಯ ದಿನ “ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಸರಗೋಡು ಐಎಪ್‌ಎಆರ್ ಮತ್ತು ಸಿಪಿಸಿಆರ್‌ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ ಮಾತನಾಡಿ, ಕರಾವಳಿಯಲ್ಲಿ ಅತಿಯಾಗಿ ಬೆಳೆಯುವ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

ಅಡಿಕೆ ಕೃಷಿಗೆ ಒಂದು ಬಾರಿ ರೋಗ ತಗುಲಿದರೆ ಅದನ್ನು ನಿವಾರಿಸಲು ವರ್ಷಗಳೇ ತಗುಲುತ್ತವೆ. ಅಂತಹ ಸಂದರ್ಭದಲ್ಲಿ ನಾವು ಹೆಚ್ಚು ಗಮನ ಹರಿಸುವುದುಅಗತ್ಯ. ಪೋಷಕಾಂಶಗಳ ನಿರ್ವಹಣೆ ಹಾಗೂ ನೀರಿನ ಸರಬರಾಜನ್ನು ಸರಿಯಾಗಿ ನೋಡಿಕೊಂಡಲ್ಲಿ ರೋಗಗಳನ್ನು ಬಳಸುವ ಅಗತ್ಯತೆಯೂ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.



































 
 

ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್‌ಐ ಯ ಹಿರಿಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಕಾರ್ಕಳ ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಗಿದೆ. ಕೃಷಿ ಎಂಬುವುದು ಕೇವಲ ಆದಾಯಕ್ಕೆ ಸೀಮಿತವಲ್ಲ. ಅರ ಪೋಷಣೆಯು ಅಗತ್ಯ. ಹಾಗಾಗಿ ವರ್ಷಕ್ಕೊಮ್ಮೆ ಅದರ ಮಣ್ಣನ್ನು ಪರಿಶೀಲಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು. ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top