ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮನ

ರಾತ್ರಿ ರಾಜಭವನದಲ್ಲಿ ವಾಸ್ತವ್ಯ

ಬೆಂಗಳೂರು : ಸೋಮವಾರ ಬೆಳಗ್ಗೆ ಬೆಂಗಳೂರಿನಲ್ಲಿ ಆರಂಭವಾಗಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಉದ್ಘಾಟಿಸುವ ಸಲುವಾಗಿ ಭಾನುವಾರ ರಾತ್ರಿಯೇ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ನರೇಂದ್ರ ಮೋದಿ ಭಾನುವಾರ ರಾಜಸ್ಥಾನ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ರಾತ್ರಿ 7.40ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜಭವನದಲ್ಲಿ ಪ್ರಧಾನಿ ಭಾನುವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ಅವರು ಯಲಹಂಕಕ್ಕೆ ತೆರಳಲಿದ್ದು, ಬೆಳಗ್ಗೆ 9.30ಕ್ಕೆ ಏರೋ ಇಂಡಿಯಾ-2023 ಉದ್ಘಾಟಿಸಲಿದ್ದಾರೆ.
ಏರೋ ಇಂಡಿಯಾ 2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top