ಪುತ್ತೂರು : ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಅವರನ್ನು ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.
ಮೂಡಬಿದಿರೆ ಬೆಳುವಾಯಿ ನಿವಾಸಿಯಾದ ಎಸ್.ಅಬ್ದುಲ್ ನಝೀರ್ ಮೂದಬಿದ್ರೆ ಮಹಾವೀರ ಕಾಲೇಜಿನಲ್ಲಿ ಪದವಿ ಪೂರೈಸಿ, ಮಂಗಳೂರು ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. 2019 ರಲ್ಲಿ ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ತನ್ನ ಪತ್ನಿ ಸಮೇತ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಗಜಾನನ ವಿದ್ಯಾಸಂಸ್ಥೆಯ ಮಕ್ಕಳೊಂದಿಗೆ ಸಂವಿಧಾನದ ಆಶಯಗಳು ವಿಚಾರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.