ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ – ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು : ಬೆಳ್ಳಿಪ್ಪಾಡಿ ಗ್ರಾಮದ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು.

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸುಮಾರು ಎಂಟು ಕಿ.ಮೀ. ದೂರದಲ್ಲಿರುವ ಬೆಳ್ಳಿಪ್ಪಾಡಿಯಲ್ಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಇದೀಗ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಜಿರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಗೌಡ ಪಮ್ಮನಮಜಲು, ಕೋಶಾಧಿಕಾರಿ ಚಂದ್ರ ಶೆಟ್ಟಿಗಾರ್ ಆಲಂಗೋಡಿ ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top