ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಬೆಂಗಳೂರು : ಕಲ್ಲು ಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ.

ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ರವಿ ಅವರ ಪ್ರಶ್ನೆಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದರು.

ಪ್ರಸ್ತುತ ರಾಜ್ಯದಲ್ಲಿ 2700 ಕಟ್ಟಡ ಕಲ್ಲುಗಣಿ ಗುತ್ತಿಗೆಗಳನ್ನು 10026-32 ಎಕರೆ ಪ್ರದೇಶದಲ್ಲಿ ಮಂಜೂರು ಮಾಡಿದ್ದು, ಅವುಗಳು ಚಾಲ್ತಿಯಲ್ಲಿವೆ. ಕಲ್ಲುಗಣಿ ಗುತ್ತಿಗೆಗಳ ಸಂಬಂಧ ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದಿಂದ ಜಾರಿ ಮಾಡುವ ಪರಿಸರ ಅನುಮತಿ ಪತ್ರದಲ್ಲಿ ವಾರ್ಷಿಕವಾಗಿ ತೆಗೆಯುವ ಉಪಖನಿಜದ ಪ್ರಮಾಣದ ಮಿತಿಯನ್ನು ನಿಗದಿಪಡಿಸಲಾಗಿದೆ. ಕಲ್ಲುಗಣಿ ಗುತ್ತಿಗೆಗಳ ವಾರ್ಷಿಕ ಉಪಖನಿಜದ ಪ್ರಮಾಣದ ಮಿತಿಯು 199 ದಶಲಕ್ಷ ಟನ್‍. ಈ ಪ್ರಮಾಣದ ಕಟ್ಟಡ ಕಲ್ಲನ್ನು ಕಲ್ಲುಗಣಿ ಗುತ್ತಿಗೆ ಪ್ರದೇಶಗಳಿಂದ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.































 
 

ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಜಲ್ಲಿ ಮತ್ತು ಎಂ. ಸ್ಯಾಂಡ್ ಪೂರೈಕೆಯಾಗುತ್ತಿರುತ್ತದೆ. ರಾಜ್ಯದಲ್ಲಿ ಎಂಸ್ಯಾಂಡ್ ಮತ್ತು ಕಟ್ಟಡ ಕಲ್ಲಿನ ಉತ್ಪನ್ನಗಳನ್ನು ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡಲು ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ಪರಾಮರ್ಶಿಸಿ ಸಚಿವ ಸಂಪುಟಕ್ಕೆ ಶಿಫಾರಸ್ಸು ಮಾಡಲು ಗಣಿ ಮತ್ತು ಭೂ ವಿಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ 2021ರ ನವೆಂಬರ್‌ 16ರಂದು ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿರುತ್ತದೆ ಎಂದು ತಿಳಿಸಿದರು.

ಸಚಿವ ಸಂಪುಟ ಉಪ ಸಮಿತಿಯು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಂ. ಸ್ಯಾಂಡ್ ಮತ್ತು ಕಟ್ಟಡ ಕಲ್ಲಿನ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸಲು ಕರ್ನಾಟಕ ಉಪಖನಿಜ ರಿಯಾಯತಿ ನಿಯಮಗಳು 1994ಕ್ಕೆ ಅಗತ್ಯ ತಿದ್ದುಪಡಿ ತಂದು ನಿಯಮಗಳನ್ನು ಸರಳೀಕರಣಗೊಳಿಸಲು ಶಿಫಾರಸ್ಸು ವರದಿಯನ್ನು ಸಲ್ಲಿಸಿದ್ದು, ನಿಯಮಗಳನ್ನು ಸರಳೀಕರಣಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top