ಫೆ. 19: 510 ಕೆಜಿಯ ಲೆವೆಲ್ ಮಾದರಿಯ ಹಗ್ಗಜಗ್ಗಾಟ

ಪುತ್ತೂರು: ಸರ್ವೆ ಹಿಂದು ಜಾಗರಣ ವೇದಿಕೆಯ ರಕ್ತೇಶ್ವರಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಫೆ. 19ರಂದು ಮಧ್ಯಾಹ್ನ 2 ಗಂಟೆಗೆ ಸರ್ವೆ ರಕ್ತೇಶ‍್ವರಿ ಕಟ್ಟೆಯಲ್ಲಿ ಸರ್ವೆಯಲ್ಲಿ ಇದೇ ಮೊದಲ ಬಾರಿಗೆ 510 ಕೆಜಿ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.

7 ಜನರ ತಂಡದಲ್ಲಿ ನಡೆಯುವ ಈ ಹಗ್ಗಜಗ್ಗಾಟ ಸ್ಪರ್ಧೆಯೂ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ನಡೆಯಲಿದೆ. ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನ 5555 ರೂ. ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 3333 ರೂ. ಹಾಗೂ ಟ್ರೋಫಿ, ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಟ್ರೋಫಿ ನೀಡಲಾಗುವುದು. ಮಹಿಳೆಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 3333 ರೂ ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ 2222 ರೂ. ಹಾಗೂ ಟ್ರೋಫಿ, ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಟ್ರೋಫಿ ನೀಡಲಾಗುವುದು. ಪುರುಷರಿಗೆ 500 ರೂ. ಹಾಗೂ ಮಹಿಳೆಯರಿಗೆ 300 ರೂ. ಪ್ರವೇಶ ಶುಲ್ಕ ನಿಗದಿ ಪಡಿಸಲಾಗಿದೆ. ಪುರುಷರಿಗೆ 510 ಕೆಜಿ ತೂಕ ನಿಗದಿ ಪಡಿಸಿದ್ದು, ಮಹಿಳೆಯರಿಗೆ ಇದು ಅನ್ವಯ ಆಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ 9743602843, 8722639079

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top