ಪುತ್ತೂರು : ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಬೈಲುವಾರು ಸಭೆ ಗುರುವಾರ ಸಂಜೆ ಬಂಗಾರಡ್ಕ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೀರ್ಣೋದ್ಧಾರದ ಕುರಿತು ಚರ್ಚಿಸಿ ಸಾರ್ವಜನಿಕರ ಸಹಕಾರ ಕೋರಲಾಯಿತು.
ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ರಾಮಕೃಷ್ಣ ಭಟ್ ಬಂಗಾರಡ್ಕ, ವಿರೂಪಾಕ್ಷ ಭಟ್ ಮಚ್ಚಿಮಲೆ, ಪ್ರದೀಪ್ ಕೃಷ್ಣ ಭಟ್ ಬಂಗಾರಡ್ಕ, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.