ಫೆ.25 ರಿಂದ ಮಾ.5 ರ ವರೆಗೆ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪಡುಮಲೆ : ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರು ಹಾಗೂ ಸಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ.25 ರಿಂದ ಮಾ.6 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಈ ಕುರಿತು ಜೀಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು ಅವರು ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿ, ಸುಮಾರು 5 ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.25 ಶನಿವಾರ ಬೆಳಿಗ್ಗೆ 9.30 ಕ್ಕೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತವನ್ನು ಗಣಪತಿ ಗೌಡ ಕೋಡಿಯಡ್ಕ ಹಾಗೂ ಜಯಂತ ರೈ ಕುದ್ಕಾಡಿ ಉದ್ಘಾಟಿಸುವರು10 ಕ್ಕೆ ಪಾಕಶಾಲೆ, 10.30 ಕ್ಕೆ ಕಾರ್ಯಾಲಯ, 11 ಕ್ಕೆ ನೀರಿನ ಟ್ಯಾಂಕ್ ಹಾಗೂ 11.15 ಕ್ಕೆ ಮುಖ್ಯವೇದಿಕೆ ಉದ್ಘಾಟನೆಗೊಳ್ಳಲಿದೆ. ಸಂಜೆ ೫ ರಿಂದ ಕ್ಷೇತ್ರದ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತದ ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿವೆ. ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 7ರಿಂದ ಪುತ್ತೂರು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ವತಿಯಿಂದ ಭರತನಾಟ್ಯ, 9 ಕ್ಕೆ ಕುದೋಳಿ ಗಣೇಶ್ ಮತ್ತು ಬಳಗದವರಿಂದ ಮಸ್ತ್ ಮ್ಯಾಜಿಕ್ ಹಾಸ್ಯಮಯ ವಿನೂತನ ಜಾದೂ ನಡೆಯಲಿದೆ.

ಫೆ.26 ಭಾನುವಾರ ರಂದು ಮುಂಜಾನೆಯಿಂದ ವೈದಿಕ ಕಾರ್ಯಕ್ರಮಗಳು, ಸಂಜೆ 5 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, 10.30 ಕ್ಕೆ ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ, 1.30 ಕ್ಕೆ ಕಾಸರಗೋಡು ಅನುಗ್ರಹ ನಾಟ್ಯಾಲಯದಿಂದ ಭರತನಾಟ್ಯ, ಮಧ್ಯಾಹ್ನ 3 ಕ್ಕೆ ಪುತ್ತೂರು ಧೀಶಕ್ತಿ ಮಹಿಳಾ ಯಕ್ಷ ಬಳಗದಿಂದ ಸಮರ ಸೌಗಂಧಿಕಾ ತಾಳಮದ್ದಳೆ, 7.30 ಕ್ಕೆ ಪುತ್ತೂರು ಪಾಂಚಜನ್ಯ ಯಕ್ಷ ಕಲಾವೃಂದದಿಂದ ಮೋಕ್ಷ ಸಂಗ್ರಾಮ ಯಕ್ಷಗಾನ ಬಯಲಾಟ ನಡೆಯಲಿದೆ.































 
 

ಫೆ.27 ಸೋಮವಾರ ಮುಂಜಾನೆಯಿಂದ ವಿವಿಧ ವೈದಿಕ ಕಾರ್ಯಕ್ರಮಗಳು ಸಂಜೆ 5 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಬೆಳಗ್ಗೆ 9.30 ಕ್ಕೆ ತಾಳಮದ್ದಳೆ, ಮಧ್ಯಾಹ್ನ 1.30 ಕ್ಕೆ ಸಂಗೀತ ಕಚೇರಿ, 7.30 ಕ್ಕೆ ದೀಪಕ್ ರೈ ಪಾಣಾಜೆ ನಿರ್ಧೇಶನದಲ್ಲಿ ತುಳು ಹಾಸ್ಯಮಯ ನಾಟಕ ನಿತ್ಯೆ ಬನ್ನಗ ಪ್ರದರ್ಶನಗೊಳ್ಳಲಿದೆ.

ಫೆ.28 ಮಂಗಳವಾರ ಮುಂಜಾನೆ 6 ರಿಂದ ವಿವಿಧ ವೈದಿಕ ಕಾರ್‍ಯಕ್ರಮಗಳು, 10 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ದಿವ್ಯ ಉಪಸ್ಥಿತರಿರುವರು. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 2.30 ರಿಂದ ಯಕ್ಷಗಾನ ನಾಟ್ಯ-ಹಾಸ್ಯ ವೈಭವ, ಸಂಜೆ ಸುಗಮ ಸಂಗೀತ, ರಾತ್ರಿ ಭಕ್ತಿ ರಸಮಂಜರಿ ನಡೆಯಲಿದೆ.

ಮಾ.1 ಬುಧವಾರ ಮುಂಜಾನೆಯಿಂದ ವೈದಿಕ ಕಾರ್ಯಕ್ರಮಗಳು, ಸಂಜೆ 5 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಕನ್ಯಾಡಿ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡುವರು. ಬೆಳಗ್ಗೆ 11ಕ್ಕೆ ಭಗವದ್ಗೀತೆಯಲ್ಲಿ ಆಧ್ಯಾತ್ಮ ಪ್ರವಚನ, 12 ಕ್ಕೆ ಪಡುಮಲೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 1.30 ರಿಂದ ಪಟ್ಟೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಸಂಜೆ 7.30 ಕ್ಕೆ ಗಾನ ಮಾಧುರಿ ನಡೆಯಲಿದೆ.

ಮಾ.2 ಗುರುವಾರ ಮಧ್ಯಾಹ್ನ 1.04 ರಿಂದ 3.15 ರ ಮಿಥುನ ಲಗ್ನ ಸುಮುಹೂರ್ತದಲ್ಲಿ ಶ್ರೀ ದೇವರ ಪ್ರತಿಷ್ಠೆ. ಸಂಜೆ 4.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅಧ್ಯಕ್ಷತೆ ವಹಿಸುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಧಾರ್ಮಿಕ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಮತ್ತಿತರರು ಪಾಲ್ಗೊಳ್ಳುವರು. ಸಂಜೆ ೭ ರಿಂದ ಹನುಮಗಿರಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗನ ಮಂಡಳಿ ವತಿಯಿಂದ ಕಲ್ಯಾಣತ್ರಯ ಯಕ್ಷಗಾನ ಬಯಲಾಟ ಜರಗಲಿದೆ.

ಮಾ.೩ ಶುಕ್ರವಾರ ಮುಂಜಾನೆಯಿಂದ ವೈದಿಕ ಕಾರ್ಯಕ್ರಮಗಳು, ಬೆಳಗ್ಗೆ 10.30 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1.30 ಕ್ಕೆ ಪದಡ್ಕ ವಿಶ್ವಕಲಾನಿಕೇಶತನ ವತಿಯಿಂದ ನೃತ್ಯ ವೈಭವ, ಸಸಂಜೆ 6 ಕ್ಕೆ ಯಕ್ಷಗಾನ ವಿದ್ಯುನ್ಮತಿ ಕಲ್ಯಾಣ ಪ್ರದರ್ಶನಗೊಳ್ಳಲಿದೆ.

ಮಾ.4 ಶನಿವಾರ ಮುಂಜಾನೆಯಿಂದ ವೈದಿಕ ಕಾರ್ಯಕ್ರಮಗಳು, ಬೆಳಗ್ಗೆ 10.30 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಅಧ್ಯಕ್ಷತೆ ವಹಿಸಲಿದ್ದು, ಬ್ರ.ವೇ.ಮೂ. ರವೀಶ ತಂತ್ರಿ ಧಾರ್ಮಿಕ ಉಪನ್ಯಾಸ ನೀಡುವರು. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಮಾ.5 ಭಾನುವಾರ ಮುಂಜನೆ 5 ರಿಂದ ಗಣಪತಿ ಹೋಮ, ಕವಾಟೋದ್ಘಾಟನೆ, ಶಾಂತಿ ಪ್ರಾಯಃಶ್ಚಿತ್ತ ಮತ್ತು ಶಾಂತಿಹೋಮ, ಕಲಶಾಭಿಷೇಕ 1008 ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಸಂಜೆ 5 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿನದಾನಂದ ಭಾರತಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top