ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ ಪೂರ್ವಶಿಷ್ಟ ಪದ್ಧತಿಯಂತೆ ಫೆ.18 ರಂದು ನಡೆಯಲಿದೆ.
ಮಧ್ಯಾಹ್ನ ಹವನ ಅಭಿಷೇಕ ಪೂಜಾದಿಗಳು, ರಾತ್ರಿ ಶ್ರೀ ದೇವರ ಬಲಿ ಹೊರಟು, ತಂತ್ರ ಸುತ್ತು ಜರಗಿ ಬಳಿಕ ಹೊರಾಂಗಣದಲ್ಲಿ ಉಡಕೆ, ಚಂಡೆ, ವಾದ್ಯ, ಸರ್ವವಾದ್ಯ ಸುತ್ತುಗಳು ನಡೆಯಲಿದೆ.
ಬಳಿಕ ಕಟ್ಟೆಪೂಜೆ, ಪಲ್ಲಕಿ ಉತ್ಸವ, ಚಂದ್ರಮಂಡಲ ರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವದೊಂದಿಗೆ ಉತ್ಸವ ಮುಗಿದು, ತಡರಾತ್ರಿ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಬಲಿ ಉತ್ಸವ ನೆರವೇರಲಿದೆ. ಜತೆಗೆ ಪಲ್ಲಕಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದೆ ಎಂದು ಶ್ರೀ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.