ಪುತ್ತೂರು : ಇತ್ತೀಚೆಗೆ ನದಿಗೆ ಈಜಲು ತೆರಳಿದ್ದ ಸಂದರ್ಭ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಇಬ್ಬರ ಮನೆಗೆ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ಮಾಡಿದರು.
ಅರಿಯಡ್ಕ ದೇರ್ಲ ನಿವಾಸಿ ನಾರಾಯಣ ಪಾಟಾಳಿ ಪುತ್ರ ಜಿತೇಶ್ ಹಾಗೂ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ ಮೃತಪಟ್ಟಿದ್ದರು, ಅವರ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.