ಪುತ್ತೂರು : ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆ ಶಾಖೆ ವತಿಯಿಂದ ಹಗ್ಗಜಗ್ಗಾಟ ಕಾರ್ಯಕ್ರಮ ರಕ್ತೇಶ್ವರಿ ಕಟ್ಟೆ ಬಳಿ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ರಕ್ತೇಶ್ವರಿ ಕಟ್ಟೆ ಆವರಣದ ಇಂಟರ್ ಲಾಕ್ ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.

ಸಮಾರಂಭದಲ್ಲಿ ಶಾಸಕ ಸಂಜೀವ ಮಠಂದೂರು ಅವರನ್ನು ರಕ್ತೇಶ್ವರಿ ಸೇವಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಪದಾಧಿಕಾರಿಗಳು, ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.