ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ ಉಚಿತ ಬಸ್‌ ಪಾಸ್‌ ಸೌಲಭ್ಯ

ವಿದ್ಯಾರ್ಥಿನಿಯರು, ಮಹಿಳಾ ನೌಕರರು ಫಲಾನುಭವಿಗಳು

ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ ವಿದ್ಯಾರ್ಥಿನಿಯರ ಬಸ್‌ ಸೌಲಭ್ಯವನ್ನು ಏಪ್ರಿಲ್‌ 1ರಿಂದಲೇ ಜಾರಿಗೆ ತರಲು ಸರಕಾರ ಮುಂದಾಗಿದೆ. ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ ಜೀವನ ಸಾಗಿಸಲು ಉಚಿತ ಬಸ್‌ಪಾಸ್‌ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾ ಅವಧಿಯಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಠ ಐದು ಬಸ್‌ಗಳನ್ನು ಓಡಿಸಲಾಗುವುದು. ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮಗಳ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top