ಹಿರಿಯ ನಟ ಅನಂತ್‌ ನಾಗ್‌ ಇಂದು ಬಿಜೆಪಿ ಸೇರ್ಪಡೆ

ಪ್ರಧಾನಿ ಮೋದಿಯ ಕಟ್ಟಾ ಅಭಿಮಾನಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಹಿರಿಯ ನಟ ಅನಂತ್‌ ನಾಗ್‌ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ.

ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top