ಪುತ್ತೂರು : ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನಲೆಯಲ್ಲಿ ಫೆ.24 ಹಾಗೂ 25 ರಂದು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಆದೇಶಿಸಿದ್ದಾರೆ.
ಮತದಾನ ದಿನದಂದು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಫೆ.24 ರ ಬೆಳಿಗ್ಗೆ 6 ಗಂಟೆಯಿಂದ ಫೆ.25 ರ ಸಂಜೆ 6 ರ ತನಕ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತಿಯ ಎಲ್ಲಾ ವಾರ್ಡ್ ಗಳಿಗೆ, ಅನಂತಾಡಿ, ನೆಟ್ಟಮುಡ್ನೂರು, ಕಡಬ ತಾಲೂಕಿನ ಕುಟ್ರುಪ್ಪಾಡಿ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಪಂನಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.