ಪುತ್ತೂರು : ಪುತ್ತೂರು ಗಾಂಧಿ ವಿಚಾರ ವೇದಿಕೆ ಹಾಗೂ ಮಂಗಳೂರು ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ” ಫೆ.26 ಬೆಳಿಗ್ಗೆ 10. ಗಂಟೆಯಿಂದ ನಗರದ ಜೈನಭವನದಲ್ಲಿ ನಡೆಯಲಿದೆ ಎಂದು ಗಾಂಧಿ ವಿಚಾರ ವೇದಿಕೆ ಮಾತೃ ಘಟಕದ ಉಪಾಧ್ಯಕ್ಷ ಅಣ್ಣಾ ವಿನಯಚಂದ್ರ ತಿಳಿಸಿದ್ದಾರೆ.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳು ಕುಸಿತಗೊಂಡಿದ್ದು, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಬರುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿ ಉಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಪ್ರಸ್ತುತ ಅಭಿವೃದ್ಧಿ ವೇಗ ಪಡೆಯುತ್ತಿದ್ದು, ಜನರಲ್ಲಿ ಪ್ರಕೃತಿ ದೋಚುವ ಕಲ್ಪನೆ ಉಂಟಾಗಿದೆ. ಅಭಿವೃದ್ಧಿ, ಪ್ರಕೃತಿ ಮನುಕುಲಕ್ಕೆ ಪೂರಕವಾಗಿರಬೇಕು ಎಂಬ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ವಿಚಾರಗಳನ್ನು ಪ್ರಸ್ತುಪಡಿಸಲಾಗುತ್ತದೆ. ಈ ಮೂಲಕ ಸಾಮರಸ್ಯದ ಬದುಕು ಕಟ್ಟಿ ಮುಂದಿನ ದಿನಗಳಲ್ಲಿ ಯುವ ಪೀಳಗೆಗೆ ತಲುಪಿಸುವ ಕೆಲಸ ಮಾಡಲಾಗುವುದು. ಒಟ್ಟಾರೆಯಾಗಿ ಭ್ರಷ್ಟಾಚಾರ ರಹಿತ ಸಮಾಜ ಕಟ್ಟುವ ಕೆಲಸ ಕಾರ್ಯಕ್ರಮದ ವಿಚಾರಗಳಿಂದ ಆಗಬೇಕು ಎನ್ನುವುದು ನಮ್ಮ ಆಶಯ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ಗಾಂಧಿ ವೇದಿಕೆ ಅಧ್ಯಕ್ಷ ಝೇವಿಯರ್ ಡಿ’ಸೋಜಾ ಉಪಸ್ಥಿತರಿದ್ದರು.