2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

ಹೊಸದಿಲ್ಲಿ : 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ವಿಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದು, ಕಾಂಗ್ರೆಸ್ ದೋಸ್ತಿ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಸದರು ಜನರ ಪರವಾಗಿ ಧ್ವನಿ ಎತ್ತಲು ಹಾಗೂ ಅದಾನಿ- ಹಿಂಡೆನ್‌ಬರ್ಗ್ ವಿಚಾರವನ್ನು ಜೆಪಿಸಿ ತನಿಖೆಗೆ ಒಪ್ಪಿಸುವ ಬೇಡಿಕೆಗೆ ಒಪ್ಪದ ಸರ್ಕಾರ ಸಂಸತನ್ನು ರಬ್ಬರ್ ಸ್ಟಾಂಪ್ ಆಗಿ ಮಾಡಿದೆ ಎಂದು ಟೀಕಿಸಿರುವ ಅವರು ಪ್ರಜಾಪ್ರಭುತ್ವವನ್ನು ದಮನಿಸುವ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯುತ್ತೇವೆ ಎಂದು ಹೇಳಿದ್ದಾರೆ.
ಜನರು ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಬೇಂದು ಮನವಿ ಮಾಡಿದ ಅವರು, ಇಲ್ಲದಿದ್ದರೆ ಸರ್ವಾಧಿಕಾರ ಬಂದು ಎಲ್ಲರನ್ನೂ ಮುಗಿಸುತ್ತದೆ ಎಂದು ಹೇಳಿದರು.
ಅದಾನಿ ವಿವಾದವನ್ನು ಪ್ರಸ್ತಾಪಿಸಿದ ಖರ್ಗೆ, ಸರಕಾರ ಬಂಡವಾಳಶಾಹಿಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಸಂಸತ್ತನ್ನು ರಬ್ಬರ್ ಸ್ಟಾಂಪ್ ಆಗಿ ಮಾಡಿದೆ. ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮುಂದಾದರೆ ನೋಟಿಸ್ ನೀಡಲಾಗುತ್ತದೆ. ಒಬ್ಬ ಮಹಿಳಾ ಸಂಸದರನ್ನು ಅಮಾನತುಗೊಳಿಸಲಾಗಿದೆ, ಏಕೆ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಸಂಸದರು ಜನರ ಸಮಸ್ಯೆಗಳು ಮತ್ತು ಅದಾನಿ ವಿರುದ್ಧ ಧ್ವನಿ ಎತ್ತುತ್ತಿದ್ದರು ಎಂದರು.







































2004 ರಿಂದ ಅದಾನಿ ಸಂಪತ್ತು 3,000 ಕೋಟಿಯಿಂದ 12 ಲಕ್ಷ ಕೋಟಿಗೆ ಏರಿದೆ. ಅಲ್ಲಿ ಏನು ಮ್ಯಾಜಿಕ್ ನಡೆದಿದೆ ಎಂದು ಪ್ರಶ್ನಿಸಿದ ಅವರು, ಈ ವಿಚಾರದಲ್ಲಿ ರಾಹುಲ್ ಗಾಂಧಿ, ದಿಗ್ವಿಜಯ್ ಸಿಂಗ್ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಆದರೆ, ನಮ್ಮ ಪಕ್ಷದ ಸಂಸದರ ಮಾತುಗಳನ್ನು ಕಡತಗಳಿಂದ ತೆಗೆದುಹಾಕಲಾಗಿದೆ ಎಂದು ಖರ್ಗೆ ಹೇಳಿದರು.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top