ಪೆರ್ನೆ : ಪೆರ್ನೆ ಮಾಡತ್ತಾರು ಕೊರತಿಕಟ್ಟೆ ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಗುರುವಾರ ನಡೆಯಿತು.
ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಭವ್ಯವಾದ ಗುಡಿಗಳನ್ನು ನಿರ್ಮಾಣ ಮಾಡಿರುವುದರ ಪರಿಣಾಮ ಜನರ ಶ್ರಮ ಇಲ್ಲಿ ಎದ್ದು ಕಾಣುತ್ತಿದೆ. ಯುವಕರ ಕಠಿಣ ಪರಿಶ್ರಮದಿಂದ ಉತ್ತಮ ಕೆಲಸ ಆಗಿದೆ. ಪರಂಪರೆಯನ್ನು ಹೇಗೆ ಉಳಿಸಬಹುದು ಅನ್ನುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ನಡೆದಿವೆ ಎಂದ ಅವರು, ಧಾರ್ಮಿಕತೆಗೆ ಒತ್ತು ಕೊಟ್ಟು ಭಜನಾ ಮಂದಿರ, ದೇವಸ್ಥಾನ, ದೈವಸ್ಥಾನ ಅಭಿವೃದಿಗೆ ಪೂರಕ ಯೋಜನೆಯನ್ನು ಸರಕಾರ ಹಮ್ಮಿಕೊಳ್ಳುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಹೊಸನಗರದ ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.
ಮುಳಿಯ ದೈವಜ್ಞ ಕೆ. ವಿ ಗಣೇಶ್ ಭಟ್, ವಾಸ್ತು ತಜ್ಞ ಮಹೇಶ್ ಮುನಿಯಂಗಳ, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ, ದ.ಕ.ಜಿ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.