ರೈತರಿಗೆ ಸಹಕಾರಿ ಸಂಘಗಳಲ್ಲಿ ನೀಡುವ ಸಾಲದ ಮೊತ್ತ 3 ಲಕ್ಷದಿಂದ  ರಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಅವರಿಂದ ಸಹಕಾರ ಸಚಿವರಿಗೆ ಮನವಿ

ಪುತ್ತೂರು : ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್ ಅವರಿಗೆ ಮನವಿ ಮಾಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ರೈತರಿಗೆ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೃಷಿ ಉತ್ಪಾದನಾ ವೆಚ್ಚದ ಅಧಿಕ ಹೊರೆ ಬೀಲುತ್ತಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹೆಚ್ಚಿನ ಸಾಲ ಬೇಕಾಗಿರುವುದರಿಂದ ಅಧಿಕ ಬಡ್ಡಿ ದರದಲ್ಲಿ ಬೇರೆ ಬೇರೆ ಸಂಸ್ಥೆಗಳ ಮೂಲಕ ಸಾಲ ಪಡೆಯುವ ಪರಿಸ್ಥಿತಿ ಉಂಟಾಗಿದೆ.

ಈ ನಿಟ್ಟಿನಲ್ಲಿ ಸಾಲದ ಮೊತ್ತ 5 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಶಾಸಕರು ಸಚಿವರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top