ಪುತ್ತೂರು : ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ.6 ರ ತನಕ ನಡೆಯುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಶುಕ್ರವಾರ ಸಂಜೆ ನಡೆಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.


ಬಳಿಕ ಮುಖ್ಯ ರಸ್ತೆಯಿಂದ ಹೊರಟ ಹಸಿರುವಾಣಿ ಮೆರವಣಿಗೆ , ಸಂಪ್ಯ, ಕುಂಬ್ರ ಮಾರ್ಗವಾಗಿ ಶ್ರೀ ಕ್ಷೇತ್ರವನ್ನು ಸಂಜೆ ಹೊತ್ತಿಗೆ ತಲುಪಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.