ಸದನಕ್ಕೆ ಸಚಿವ ಸುನಿಲ್ ಕುಮಾರ್ ಹೇಳಿಕೆ
ಬೆಂಗಳೂರು : ಸರಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳ ಗೌರವ ಧನವನ್ನು ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ 1 ಸಾವಿರ ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಎಪ್ರಿಲ್‌ನಿಂದ ಜಾರಿಗೆ ಬರಲಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಸಾ.ರಾ.ಮಹೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಪ್ರಸ್ತುತ ಮಾಸಿಕ 3,700 ರೂ. ಹಾಗೂ ಅಡುಗೆ ಸಹಾಯಕರಿಗೆ ಮಾಸಿಕ 3,400 ರೂ. ಗೌರವ ಸಂಭಾವನೆ ಇದೆ.
ಇದನ್ನು ಈ ಬಜೆಟ್‌ನಲ್ಲಿ 1 ಸಾವಿರ ರೂ. ಏರಿಕೆ ಮಾಡಲಾಗಿದೆ. ಇದು ಎಪ್ರಿಲ್ 1 ರಿಂದ ಜಾರಿಯಾಗಲಿದೆ ಎಂದರು.
























