ಪುತ್ತೂರು : ಕರ್ನಾಟಕ ರಾಜ್ಯ ಎಸ್ ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆ ವತಿಯಿಂದ ದ,ಕ.ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಎಸ್‍ಡಿಎಂಸಿಯ 21ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ ಫೆ.28 ಮಂಗಳವಾರ ಮಾಣಿ ನೆರಳಕಟ್ಟೆ ಜಯಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ರಾಜ್ಯ ಎಸ್‍ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷ ಮೊಯಿದೀನ್ ಕುಟ್ಟಿ ತಿಳಿಸಿದ್ದಾರೆ.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ 7 ಶೈಕ್ಷಣಿಕ ಜಿಲ್ಲೆಯ 6 ಶಾಲೆಗಳಂತೆ 42 ಉತ್ತಮ ಶಾಲೆಗಳನ್ನು ಆಯ್ಕೆ ಮಾಡಿ ಅಭಿನಂದಿಸಲಾಗುವುದು. ಕಾರ್ಯಕ್ರಮದಲ್ಲಿ ಸುಮಾರು ಒಂದು ಸಾವಿರದಿಂದ ಒಂದೂವರೆ ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಅಂದು ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ನ್ಯಾಯಾಧೀಶೆ, ಮಂಗಳೂರು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಶೋಭ ಬಿ.ಜೆ. ನೆರವೇರಿಸುವರು. ದ.ಕ.ಜಿಲ್ಲಾ ಶಾಲಾಭಿವೃದ್ಧಿ ಸಮಿತಿ ದ್ವಿತೀಯ ಸಮಾವೇಶದ ಸಂಚಾಲಕ ಚಂದ್ರಶೇಖರ ಕೊಂಕಣಾಜೇ ಅಧ್ಯಕ್ಷತೆ ವಹಿಸುವರು. ಶಿಕ್ಷಣ ತಜ್ಞ, ಎಸ್‍ಡಿಎಂಸಿ ಸಮನ್ವಯ ವೇದಿಕೆ ಮಹಾ ಪೋಷಕ ಡಾ.ನಿರಂಜನಾರಾಧ್ಯ ವಿ.ಪಿ. ದಿಕ್ಸೂಚಿ ಭಾಷಣ ಮಾಡುವರು.ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು, , ಶಾಸಕ, ವಿಪಕ್ಷ ನಾಯಕ ಯು,ಟಿ.ಖಾದರ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಐಎಎಸ್ ನಿವೃತ್ತ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ, ಐಪಿಎಸ್ ಮಾಜಿ ಜಿಲ್ಲಾಧಿಕಾರಿ ಸಶಿಕಾಂತ್ ಸೆಂಥಿಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸುಧಾಕರ್, ದ.ಕ. ಅಕ್ಷರ ದಾಸೋಹ ಸಮನ್ವಯಾಧಿಕಾರಿ ಉಷಾ, ಕೋಲಾರ ಬಂಗಾರಪೇಟೆ ಶಿಕ್ಷಣಾಧಿಕಾರಿ ಡಿ.ಎನ್.ಸುಕನ್ಯಾ, ರಾಜ್ಯ ಎಸ್‍ಡಿಎಂದು ಸಮನವ್ಯ ವೇದಿಕೆ ಅಧ್ಯಕ್ಷ ಮೊಯಿದಿನ್ ಕುಟ್ಟಿ, , ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, , ಗುರುವಾಯನಕೆರೆ ನವಶಕ್ತಿಯ ಶಶಿಧರ್ ಶೆಟ್ಟಿ ಬರೋಡ, , ನರಿಮೊಗರು ಮೇಘಾ ಫ್ರೂಟ್ ಪ್ರೊಸೆಸಿಂಗ್ ಪ್ರೈ. ಲಿ.ನ ಸತ್ಯಶಂಕರ್ ಕೆ., ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ನಳಿನಿ ಲೋಕಪ್ಪ ಗೌಡ, ಪ್ರಾ.ಶಾ.ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್, ದ.ಕ. ದೈ, ಶಿ, ಶಿಕ್ಷಕ ಸಂಘದ ಕಾರ್ಯಾಧ್ಯಕ್ಷ ಮಾಮಚ್ಚನ್ ಪಾಲ್ಗೊ:ಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಮಧ್ಯಾಹ್ನ 2.30 ಕ್ಕೆ ನಡೆಯುವ ಸಮಾರೋಪ ಸಮಾರಂಭದದಲ್ಲಿ ಮಾಜಿ ರಮಾನಾಥ ರೈ ಬಿ. ಅಭಿನಂದಿಸುವರು. ಎಸ್‍ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಎಂ.ಇಸ್ಮಾಯಿಲ್ ಅಧ್ಯಕ್ಷತೆ ವಹಿಸುವರು ಮುಖ್ಯ ಅತಿಥಿಗಳಾಗಿ ಶಾಸಕ ಮಂಜುನಾಥ ಭಂಡಾರಿ, ಬೆಳ್ತಂಗಡಿ ಜಿಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಉದ್ಯಮಿ ಅಶೋಕ್ ಕುಮಾರ್ ರೈ, ಮೂಡೂರು ಪಡೂರು ಕಂಬಳ ಸಮಿತಿ ಅಧ್ಯಕ್ಷ ಪಿಯೂಷ್ ಎಲ್. ರೋಡ್ರಿಗಸ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್‍ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾ ಉಪಾಧ್ಯಕ್ಷೆ ಪ್ರಮೀಳಾ ಆಚಾರ್ಯ, ತಾಲೂಕು ಸಂಘಟನಾ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಜಿಲ್ಲಾ ಸದಸ್ಯ ಉಸ್ಮಾನ್ ನೆಕ್ಕಿಲು, ಕೃಷ್ಣ ನಾಯ್ಕ್ ಉಪಸ್ಥಿತರಿದ್ದರು.