ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನಾವರಣಗೊಳಿಸಿದರು.

ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ. ಸಿ. ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆ.ಸಿ. ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು. ಚೆಂಗಲರಾಯ ರೆಡ್ಡಿ ಎನ್ನುವ ಹೆಸರಿನಲ್ಲಿ ಮೈಸೂರು ರಾಜ್ಯದ ಮೊಟ್ಟ ಮೊದಲ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿದವರು.

ಕೋಲಾರ ಜಿಲ್ಲೆ ಕೆ.ಜಿ.ಎಫ್ ತಾಲೂಕಿನ ಕ್ಯಾಸಂಬಳ್ಳಿ ಊರಿನ ಕೆ.ಸಿ. ರೆಡ್ಡಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಪ್ರಖ್ಯಾತರಾದವರು. ಜವಾಹರಲಾಲ್ ನೆಹರೂ ಅವರು ಪ್ರಧಾನಿಯಾಗಿದ್ದಾಗ ಮಧ್ಯಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಕೆ. ಸುಧಾಕರ್, ಆನಂದ್ ಸಿಂಗ್, ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ಕೆ.ಸಿ.ರೆಡ್ಡಿ ಕುಟುಂಬಸ್ಥರು ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top