ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ನೇತೃತ್ವದಲ್ಲಿ ಹುಬ್ಬಳ್ಳಿ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶ, ನರಿಮೊಗರು ಗ್ರಾಪಂ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ “ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ಕಾನೂನು ಮಾಹಿತಿ ಸಮೀಕ್ಷೆ ಫೆ.27 ಸೋಮವಾರ ಬೆಳಿಗ್ಗೆ 9.30 ಕ್ಕೆ ಶಾಂತಿಗೋಡು ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ನರಿಮೊಗರು ಗ್ರಾಪಂ ಅಧ್ಯಕ್ಷೆ ವಿದ್ಯಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ.ಪಿ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಪಂ ಉಪಾಧ್ಯಕ್ಷ ಸುಧಾಕರ್ ಕುಲಾಲ್, ಪಿಡಿಒ ರವೀಂದ್ರ ಯು. ಭಾಗವಹಿಸುವರು.
ಶಾಂತಿಗೋಡು ಶಾಲಾ ಮುಖ್ಯ ಶಿಕ್ಷಕಿ ಸವಿತಾಕುಮಾರಿ ಎಂ.ಡಿ., ಎಸ್ ಡಿಎಂಸಿ ಅಧ್ಯಕ್ಷೆ ಸುಮಾವತಿ, ನ್ಯಾಯವಾದಿ ಸುಧೀರ್ ಕುಮಾರ್ ತೋಳ್ಪಾಡಿ, ಶಾಂತಿಗೋಡು ಗ್ರಾಮ ವಿಕಾಸ ಸಮಿತಿ ಸದಸ್ಯರಾದ ಕೃಷ್ಣ, ವಿನೋದ್ ಉಪಸ್ಥಿತರಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.