ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ | ಹರಿದು ಬಂದ ಜನಸಾಗರ

ಪುತ್ತೂರು : ಐತಿಹಾಸಿಕ ಕ್ಷೇತ್ರ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ರವಿವಾರ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು.

ಪೂರ್ವಾಹ್ನ 6 ರಿಂದ ಗಣಪತಿ ಹೋಮ, ಪ್ರಾಯಶ್ಚಿತ ಹೋಮಗಳು, ಚತು:ಶುದ್ದಿಧಾರ, ಅವಾಗಹ, ಪಂಚಕ, ಅಂಕುರ ಪೂಜೆ, ಅಪರಾಹ್ನ ಅಂಕುರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಹೋಮ ಕಲಶಾಭಿಷೇಕ, ಅಂಕುರ ಪೂಜೆ, ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಆಲಂತಡ್ಕ ಶ್ರೀ ವನಶಾಸ್ತಾರ ಮಕ್ಕಳ ಕುಣಿತ ಭಜನ ತಂಡ ಹಾಗೂ ನಿಡ್ಪಳ್ಳಿ ಶಾಂತದುರ್ಗಾ ಭಜನ ಮಂಡಳಿಯಿಂದ ಭಜನೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top