ಪುತ್ತೂರು : ರಾಷ್ಟ್ರೀಯ ಹಬ್ಬಗಳ ಆಚರಣೆ ಅಂಗವಾಗಿ ಮೈಸೂರಿನಲ್ಲಿ ಭಾನುವಾರ ನಡೆದ ದಕ್ಷಿಣ ಭಾರತ ಯೋಗಾಸನ ಕ್ರೀಡಾ ಸ್ಪರ್ಧೆಯಲ್ಲಿ ಕಾಣಿಯೂರಿನ ವಿದ್ಯಾರ್ಥಿನಿಯೋರ್ವರು ಸಾಧನೆ ಮೆರೆದಿದ್ದಾರೆ.
12-15 ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. 5ನೇ ಸ್ಥಾನ ಹಾಗೂ ಚಾಂಪಿಯನ್ ಆಪ್ ಚಾಂಪಿಯನ್ ನಲ್ಲಿ 4ನೇ ಸ್ಥಾನ ಪಡೆದು ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಶ್ರೀಮಾ ಅವರು ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಮತ್ತು ಸುಜಿತಾ ದಂಪತಿ ಪುತ್ರಿ.
ಕರ್ನಾಟಕ ಸರಕಾರ, ಜಿಲ್ಲಾಡಳಿ, ಮೈಸೂರು ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ, ಎಸ್ ಜಿಎಸ್ ಅಂತರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಮೈಸೂರು ಯೋಗ ಒಕ್ಕೂಟದ ಸಹಯೋಗದೊಂದಿಗೆ ಸ್ಪರ್ಧೆ ನಡೆಯಿತು.