ಪುತ್ತೂರು: ಪುತ್ತೂರು ತಾಲೂಕಿನ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮೊದಲನೇ ದಿನವಾದ ಫೆ.25ರಂದು ರಾತ್ರಿ ದರ್ಬೆ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಗುರು ದೀಪಕ್ ಕುಮಾರ್ ಅವರ ಶಿಷ್ಯ ವೃಂದದವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.
