‘ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ವಿಧಾನಸಭೆ ಚುನಾವಣೆಗೆ ದಿಕ್ಸೂಚಿ’ | ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲವೇ ಈ ಜಯ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಹುದ್ದೆಗೆ ನಡೆದ ಉಪಚುನಾವಣೆಯ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಶಾಸಕ ಸಂಜೀವ ಮಠಂದೂರು ಅವರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲ ಈ ಜಯ ಎಂದು ಬಿಜೆಪಿಯ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿಳಿಸಿದ್ದಾರೆ.

ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಅಧಿಕಾರದ ಕ್ಷೇತ್ರ. ಈ ಹಿಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯೇ ಆಗಿದ್ದ ಗಿರೀಶ್ ಗೌಡ ಅವರು ಈ ವಾರ್ಡಿನ ಸದಸ್ಯರಾಗಿದ್ದರು. ಅವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ಮತ್ತೊಮ್ಮೆ ಚುನಾವಣೆ ನಡೆದಿದೆ. ಅವರು ಮಾಡಿರುವ ಅಭಿವೃದ್ಧಿ ಕೆಲಸ, ಜನರ ಜೊತೆಗಿನ ಒಡನಾಟ ಹಾಗೂ ಈಗಿನ ಅಭ್ಯರ್ಥಿ ಯತೀಶ್ ದೇವ ಅವರ ಜನರೊಂದಿಗಿನ ಒಡನಾಟದಿಂದಾಗಿ ಬಿಜೆಪಿ ಹೆಚ್ಚಿನ ಮತಗಳನ್ನು ಈ ಬಾರಿಯೂ ಪಡೆದಿದೆ. ಅಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಸ್ಪರ್ಧೆ ಏರ್ಪಟ್ಟಿದ್ದು, ಶಾಸಕ ಸಂಜೀವ ಮಠಂದೂರು ಅವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮದಿಂದಾಗಿ ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚಿನ ಮತ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಆರ್ಯಾಪು ಗ್ರಾಮ ಪಂಚಾಯತಿನ ಗಿರೀಶ್ ಗೌಡ ಸ್ಪರ್ಧಿಸುತ್ತಿದ್ದ ಕ್ಷೇತ್ರದಲ್ಲಿ, ಈ ಬಾರಿ 171 ಮತಗಳ  ಅಂತರದಿಂದ ಗೆಲುವು ಸಾಧಿಸಿದ್ದೇವೆ. ಅಂದರೆ ನಮ್ಮ ನಿರೀಕ್ಷೆಗಿಂತಲೂ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಿದ್ದೇವೆ. ಆದ್ದರಿಂದ ಈ ಗೆಲುವಿನಂತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಬಹುಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top