ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮವನ್ನು ಆಚರಿಸಲಾಯಿತು. ಬಿಜೆಪಿ ಕಚೇರಿಯಲ್ಲಿ ಶಾಸಕ ಸಂಜೀವ ಮಠಂದೂರು ಹಾಗೂ ಪ್ರಮುಖರು ಅಭಿನಂಧಿಸಿ, ಶುಭಹಾರೈಸಿದರು.




ಇದೇ ಸಂದರ್ಭ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಲಾಯಿತು. ಗೆಲುವು ಪಡೆದ ತಕ್ಷಣ ಬಿಜೆಪಿಗೆ ಕಚೇರಿಗೆ ತೆರಳಿ ಬಳಿಕ ಆರ್ಯಾಪು ಗ್ರಾಮ ಪಂಚಾಯತಿಗೆ ತೆರಳಲಾಯಿತು.
ಗಿರೀಶ್ ಗೌಡ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಗಿರೀಶ್ ಗೌಡ ಅವರ ಮನೆಗೆ ತೆರಳಿ, ಅವರ ಭಾವಚಿತ್ರಕ್ಕೆ ಹೂಹಾರ ಹಾಕಲಾಯಿತು.
ಬಳಿಕ ಸಂಟ್ಯಾರ್ ಜಂಕ್ಷನಿನಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಆರ್ಯಾಪು ಗ್ರಾಪಂ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯ ಹರೀಶ್ ನಾಯಕ್ ಬಳಕ್ಕ ಮೊದಲಾದವರು ಉಪಸ್ಥಿತರಿದ್ದರು.