ಆರ್ಯಾಪು ಗ್ರಾಪಂ ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ಡಿ.ಬಿ. ಜಯ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ಡಿ.ಬಿ. ಅವರು 171 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಯತೀಶ್ ಡಿ.ಬಿ. ಅವರು 498 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೈ ತೋಟ್ಲ ಅವರು 327 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತಗಳು ತಿರಸ್ಕೃತಗೊಂಡಿವೆ. ಒಟ್ಟು 836 ಮತಗಳು ಚಲಾವಣೆಗೊಂಡಿದ್ದವು.

ಆರ್ಯಾಪು ಗ್ರಾಮ ಪಂಚಾಯತ್‍ನ ಸದಸ್ಯರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಫೆ. 25ರಂದು ಚುನಾವಣೆ ನಡೆದಿತ್ತು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top