ಖುಷ್ಬೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ

ಚೆನ್ನೈ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿರುವ ನಟಿ ಖುಷ್ಬೂ ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಶಿಫಾರಸ್ಸಿನ ಮೇರೆಗೆ ಖುಷ್ಬೂ ಈ ಹುದ್ದೆಗೇರಿದ್ದಾರೆ.ಈ ನಾಮನಿರ್ದೇಶನ ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಇರುತ್ತದೆ.

ಎನ್‌ಸಿಡಬ್ಲ್ಯು ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ ಖುಷ್ಬೂ ಅವರನ್ನು ಅಣ್ಣಾಮಲೈ ಅಭಿನಂದಿಸಿದ್ದಾರೆ. ಕನ್ನಡ ಸಿನೆಮಾಗಳ ಮೂಲಕ ಪ್ರಸಿದ್ಧಿಗೆ ಬಂದ ನಟಿ ಖುಷ್ಬೂ ಬಳಿಕ ತಮಿಳು ಚಿತ್ರರಂಗದಲ್ಲಿ ಯಶಸ್ವಿ ನಾಯಕಿಯಾಗಿದ್ದರು. ಕನ್ನಡ ಮತ್ತು ತಮಿಳಿನಲ್ಲಿ ಅವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

ತಮಿಳಿನವರ ಆರಾಧ್ಯ ದೇವರಾಗಿದ್ದ ಖುಷ್ಬೂ ಬಳಿಕ ಅಲ್ಲಿಯೇ ಕಕಾಂಗ್ರೆಸ್‌ ಮೂಲಕ ರಾಜಕೀಯಕ್ಕೆ ಪದಾರ್ಪಣೆ ಮಾಡಿದರು. ಅನಂತರ ಬಿಜೆಪಿ ಸೇರಿದ ಅವರು ಈಗ ಉನ್ನತ ಹುದ್ದೆಗೆ ಹೋಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top