ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ : ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಚಾಲನೆ

ಬೆಂಗಳೂರು : ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಆರಂಭವಾಗುವ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮಾ.1ರಂದು ಬೆಳಗ್ಗೆ 11ಕ್ಕೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ, ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ ಸೋಲಿಗ ಸಮುದಾಯದ ಜೊತೆ ಸಂವಾದ ನಡೆಸಲಿದ್ದಾರೆ. ಬಳಿಕ ಸಾಲೂರು ಮಠಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ‌ಮಂಟಪ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಸಂಜೆ 4.25ಕ್ಕೆ ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top