ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಜಾತ್ರಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಮಾ.7 ಹಾಗೂ 8 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ುತ್ಸವದ ಅಂಗವಾಗಿ ಮಾ.7 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಪಂಚವಿಂಶತಿ ಕಲಶ ಪ್ರತಿಷ್ಠೆ, ಅಧಿವಾಸ ಹೋಮ, ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಲಲಿತಾ ಸಹಸ್ರನಾಮ ಪಾರಾಯಣ, ಸಂಜೆ ದೈವಗಳಿಗೆ ತಂಬಿಲ, ಭಜನೆ, ರಂಗಪೂಜೆ, ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ವಸಂತಕಟ್ಟೆ ಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಮಾ.8 ರಂದು ಸಂಜೆ ಭಜನೆ, ದೈವಗಳ ಭಂಡಾರರ ತೆಗೆಯುವುದು, ಶ್ರೀ ದೇವಿಗೆ ಹೂವಿನ ಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಬಳಿಕ ದುಗ್ಗಲಾಯ ಮತ್ತು ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.