ಪುತ್ತೂರು : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಮಹಾಸಭೆ ಮಾ. 4 ಶನಿವಾರ ಅಪರಾಹ್ನ 3.30ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಭಾರತಿ ಎಂ.ಎಲ್. ಪಾಲ್ಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ವಿಶ್ವಕರ್ಮ ಮಹಿಳಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.